ತುರುವೇಕೆರೆ.
ಇಂದು ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ಟಿ.ಬಿ. ಎಸ್.ಬಿ.ಜಿ. ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 14/17 ವಯೋಮಿತಿಯ ಬಾಲಕ/ಬಾಲಕಿಯರ ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಶ್ರೀ ರಾಜಯೋಗನಂದನಾಥ ಸ್ವಾಮೀಜಿಯವರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಾಯಸಂದ್ರ, ಗಣ್ಯರು, ಕ್ರೀಡಾಪಟುಗಳು, ತೀರ್ಪುಗಾರರು, ಕ್ರೀಡಾಭಿಮಾನಿಗಳು, ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಯವರು ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆ ನೀಡಿ ಗೌರವಿಸಿ ಆಶೀರ್ವಾದಸಿದರು.