ಮಡಿಕೇರಿ.
ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟವನ್ನು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಎ. ಎಸ್ ಪೊನ್ನಣ್ಣರವರು ಮತ್ತು ಮಡಿಕೇರಿ ಶಾಸಕರಾದ ಶ್ರೀ ಮಂಥರ್ ಗೌಡ ಭಾಗವಹಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದರು.
ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಆಯೋಜಿತ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣರವರು ಮಾತನಾಡಿ ಕೊಡಗು ಜಿಲ್ಲಾ ಅಸಂಖ್ಯ ಕ್ರೀಡಾಪಟುಗಳನ್ನು ರಾಜ್ಯ ಮತ್ತು ರಾಷ್ಟ್ರಮಟ್ಟಕ್ಕೆ ನೀಡಿದ ಖ್ಯಾತಿಯನ್ನು ಹೊಂದಿದೆ. ಕ್ರೀಡಾ ಚಟುವಟಿಕೆಗಳನ್ನು ಪ್ರತಿಯೊಬ್ಬರು ತೊಡಗಿಸಿಕೊಳ್ಳುವುದು ಅವಶ್ಯ ಎಂದು ಹೇಳಿದರು ಇಂಥ ಕ್ರೀಡಾ ಚಟುವಟಿಕೆಗಳು ನಮ್ಮ ಆರೋಗ್ಯವನ್ನು ಕಾಪಾಡುವುದಲ್ಲದೆ ಸಮ ಚಿತ್ತತೆಯಿಂದ ಬದುಕಲು ಸಹಾಯ ಮಾಡುತ್ತದೆ ಎಂದರು.

ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಮಾತನಾಡಿ ಮಳೆಯ ಕಾರಣದಿಂದ ದಸರಾ ಸಂದರ್ಭದಲ್ಲಿ ನಡೆಯಬೇಕಿದ್ದ ಕಬಡ್ಡಿ ಪಂದ್ಯವು ಇಂದು ಆಯೋಜಿಸಲಾಗುತ್ತಿದೆ, ಇಂಥ ಕ್ರೀಡಾಕೂಟದಲ್ಲಿ ಗೆಲುವು ಸೋಲುಗಳಿಗಿಂತ ಮಿಗಿಲಾಗಿ ಪಾಲ್ಗೊಳ್ಳುವಿಕೆ ಮುಖ್ಯವಾಗುತ್ತದೆ ಎಂದರು.
ಶಾಸಕದ್ವಯರು ಇಬ್ಬರು ಮೈದಾನಕ್ಕೆ ಇಳಿದು ಕಬಡ್ಡಿ ಕಬಡ್ಡಿ ಎಂದು ಆಡಿ ಆಟಗಾರರನ್ನು ಮತ್ತು ನೆರದಿದ್ದ ಜನರನ್ನು ರಂಜಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ, ಮಡಿಕೇರಿ ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಮಡಿಕೇರಿ ಯುವ ದಸರ ಸಮಿತಿ ಅಧ್ಯಕ್ಷ ಕವನ್ ಕುತ್ತೋಳಿ ಉಪಸ್ಥಿತರಿದ್ದರು.