ಹುಣಸೂರು.
ಹುಣಸೂರಿನ ರಂಗ ಕಲಾವಿದ, ಚಲನಚಿತ್ರ ನಟ ಕುಮಾರ್ ಅರಸೇಗೌಡರು “ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ರಾಷ್ಟ್ರೀಯ ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ.
ರಂಗ ಕಲಾವಿದ ಕುಮಾರ್ ಅರಸೇಗೌಡರು ತಮ್ಮ ಅಭಿನಯದ ಮೂಲಕ ಜನಮಾನಸದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದು ಮುದುಕನ ಮದುವೆಯಂತ ಯಶಸ್ವಿ ನಾಟಕದಲ್ಲಿ ನಟಿಸಿ ಜನಮೆಚ್ಚುಗೆ ಪಡೆದಿರುವ ನಟ ಹತ್ತಾರು ನಾಟಕಗಳಲ್ಲಿ ನೂರಾರು ಸಿನಿಮಾಗಳಲ್ಲಿ, ಕಿರುಚಿತ್ರಗಳಲ್ಲಿ ನಟಿಸಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇವರಿಗೆ ಹತ್ತಾರು ಪ್ರಶಸ್ತಿಗಳು ಲಭಿಸಿದು ಕಳೆದ ಸಾಲಿನಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದನ್ನು ಸ್ಮರಿಸಿಕೊಳ್ಳಬಹುದು.
ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ (ರಿ) ಕರ್ನಾಟಕ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ದಿನಾಂಕ 19.10.2025ರಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು.